ಸುಳ್ಯ: ಸುಳ್ಯಕ್ಕೆ ಮಂಜೂರುಗೊಂಡ 110 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿ ಆರಂಭಿಸುವ ಕುರಿತು ಕಾಮಗಾರಿ ಅನುಷ್ಠಾನ ಮಾಡುವ ಬಗ್ಗೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಕೆಪಿಟಿಸಿಎಲ್ ಎಂಡಿ ಹಾಗೂ ಸಂಬಂಧಪಟ್ಟವರನ್ನು
ಸುಳ್ಯಕ್ಕೆ ಕರೆಯಿಸಿ ಕಾಮಗಾರಿ ಆರಂಭದ ಕುರಿತು ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಶಾಸಕರ ಕಚೇರಿಯಲ್ಲಿ 110 ಕೆವಿ ಸಬ್ ಸ್ಟೇಷನ್ ನಿರ್ಮಾಣದ ಬಗ್ಗೆ ಇಂದು ಮೆಸ್ಕಾಂ ಇಂಜಿನಿಯರ್ಗಳಿಂದ ಶಾಸಕರು ಮಾಹಿತಿ ಪಡೆದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ, ತಾ.ಪಂ.ಮಾಜಿ ಅಧ್ಯಕ್ಷ ಶಂಕರ್ ಪೆರಾಜೆ, ಸುನಿಲ್ ಕೇರ್ಪಳ, ಶೈಲೇಶ್ ಅಂಬೆಕಲ್ಲು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.