ನಾಗಪುರ: ಸಂಘಟಿತ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ, ಇಂಗ್ಲೆಂಡ್ ಎದುರಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.ನಾಗಪುರದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಂಗ್ಲರ ಬಳಗ 47.4 ಓವರ್ಗಳಲ್ಲಿ 248 ರನ್ ಗಳಿಸಿ ಆಲೌಟ್ ಆಯಿತು.ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಇನ್ನೂ
68 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ಗೆ 251 ರನ್ ಗಳಿಸಿ ಜಯದ ನಗೆ ಬೀರಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ. ಭಾರತದ ಪತ ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಅಕ್ಷರ್ ಪಟೇಲ್ ಅರ್ಧ ಶತಕ ಸಿಡಿಸಿದರು. ಗಿಲ್ 96 ಎಸೆತಗಳಲ್ಲಿ 14 ಬೌಂಡರಿ ನೆರವಿನಿಂದ 87 ರನ್ ಬಾರಿಸಿದರೆ, ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ನೆರವಿನಿಂದ ಬಿರುಸಿನ 59 ರನ್ ಬಾರಿಸಿದರು. ಅಕ್ಷರ್ ಪಟೇಲ್ 47 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್ ನೆರವಿನಿಂದ 52 ರನ್ ಬಾರಿಸಿದರು. ಇಂಗ್ಲೆಂಡ್ ಪರ ನಾಯಕ ಜೋಸ್ ಬಟ್ಲರ್(52), ಜೆ.ಬೆಥೇಲ್ (51) ಅರ್ಧ ಶತಕ ಸಿಡಿಸಿದರು. ಭಾರತದ ಪರ ಹರ್ಷಿತ್ ರಾಣಾ, ರವೀಂದ್ರ ಜಡೇಜ ತಲಾ 3 ವಿಕೆಟ್ ಪಡೆದರು.ಮುಂದಿನ ಪಂದ್ಯವು ಕಟಕ್ನಲ್ಲಿ ಭಾನುವಾರ (ಫೆ.9ರಂದು) ನಡೆಯಲಿದೆ.