ಮೊಹಾಲಿ: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯ ದಲ್ಲಿ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರ್ಗಳಲ್ಲಿ 276 ರನ್ಗೆ ಆಲ್ ಔಟ್ ಆಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆಸ್ಟ್ರೇಲಿಯಾ ಆರಂಭದಲ್ಲಿಯೇ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿತು. ಬಳಿಕ ಡೇವಿಡ್ ವಾರ್ನರ್ ಹಾಗೂ
ಸ್ಟೀವ್ ಸ್ಮಿತ್ 94 ರನ್ಗಳ ಜತೆಯಾಟವಾಡಿದರು. ಡೇವಿಡ್ ವಾರ್ನರ್ 53 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 52 ರನ್ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.ಸ್ಟೀವ್ ಸ್ಮಿತ್ 60 ಎಸೆತಗಳನ್ನು ಎದುರಿಸಿ 3 ಬೌಂಡರಿ ಒಂದು ಸಿಕ್ಸರ್ ಸಹಿತ 41 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಇನ್ನುಳಿದಂತೆ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 31 ರನ್, ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಶ್(45) ಹಾಗೂ ಮಾರ್ಕಸ್ ಸ್ಟೋನಿಸ್(29 ಚುರುಕಾಗಿ ರನ್ ಗಳಿಸುವ ಮೂಲಕ ತಂಡದ ಮೊತ್ತ 250ರ ಗಡಿ ದಾಟುವಂತೆ ಮಾಡಿದರು.
ಭಾರತದ ಪರ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ನಡೆಸಿ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. 10 ಓವರ್ನಲ್ಲಿ 51 ರನ್ ನೀಡಿ ಶಮಿ 5 ವಿಕೆಟ್ ಉರುಳಿಸಿದರು. ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ ತಲಾ ಒಂದು ವಿಕೆಟ್ ಪಡೆದರು.