ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನತ್ತ ಮುನ್ನಡೆದಿದೆ.ಭಾರತ 462 ರನ್ಗಳ ಮೊದಲ ಇನ್ನಿಂಗ್ಸ್ ಮೊತ್ತದ ಬಳಿಕ ಶ್ರೀಲಂಕಾವನ್ನು 284 ರನ್ಗಳಿಗೆ ಆಲೌಟ್ ಮಾಡಿತ್ತು.ಎರಡನೇ ಇನ್ನಿಂಗ್ಸ್ನಲ್ಲಿ ಭಾರತ 193 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ
ಭಾರತ ತಂಡ 371 ರನ್ಗಳ ಮುನ್ನಡೆ ಸಾಧಿಸಿದೆ. ಗುರಿ ಬೆನ್ನಟ್ಟಿದ ಶ್ರೀಲಂಕಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿದೆ. ಭಾರತದ ಪರ ಮಾನವ್ ಸುತಾರ್ ಎರಡು ವಿಕೆಟ್ ಪಡೆದರು.
ಭಾರದತ ಪರ ಎರಡನೇ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ ಆಕ್ರಮಣಕಾರಿ ಶೈಲಿಯಲ್ಲಿ ಬ್ಯಾಟ್ ಬೀಸಿದರು. 69 ಎಸೆತಗಳಲ್ಲಿ 66 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ಗಳು ಸೇರಿದ್ದವು.ಅವರು ಟೆಸ್ಟ್ ಕ್ರಿಕೆಟ್ನಲ್ಲಿ 100 ಸಿಕ್ಸರ್ಗಳ ಮೈಲಿಗಲ್ಲು ತಲುಪಿದ ಮೊದಲ ಭಾರತೀಯ ಬ್ಯಾಟರ್ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ ಭಾರತ 462 ರನ್ಗಳ ಬೃಹತ್ ಮೊತ್ತ ದಾಖಲಿಸಿತ್ತು. ದೇವದತ್ ಪಡಿಕ್ಕಲ್ ಅಮೋಘ 167 ರನ್ ಗಳಿಸಿ ಭಾರತದ ಇನ್ನಿಂಗ್ಸ್ನ ಪ್ರಮುಖ ಆಕರ್ಷಣೆಯಾಗಿದ್ದರು. ಕೆ.ಎಲ್. ರಾಹುಲ್ ಕೂಡ 82 ರನ್ ಗಳಿಸಿ ಗಮನಾರ್ಹ ಕೊಡುಗೆ ನೀಡಿದ್ದರು.








































