ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಐದನೇ ದಿನವಾದ ಏ.3ರ ಬುಧವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಹಾಗೂ
ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರಿತ್ ಕುಮಾರ್ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದಾರೆ.ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿರುವ ಆರ್. ಪದ್ಮರಾಜ್ ಅವರು ಮೂರು ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.