ಹೊಸದಿಲ್ಲಿ: 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿದೆ. ಅಲ್ಲದೇ 2023ರ ಸೆಪ್ಟೆಂಬರ್ 30ರ ಒಳಗಡೆ ನೋಟುಗಳನ್ನು ಬದಲಾಯಿಸಬೇಕಾಗಿ ಆರ್ಬಿಐ ಸೂಚಿಸಿದೆ. 2,000 ರೂಪಾಯಿ ಮುಖಬೆಲೆಯ ಬ್ಯಾಂಕ್ ನೋಟುಗಳು ಈಗ ಕಾನೂನುಬದ್ಧವಾಗಿ ಮುಂದುವರಿಯುತ್ತದೆ.
2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.