ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಗುರುವಾರ (ಏ.9) ಮಧ್ಯಾಹ್ನ 3ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ
ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://karresults.nic.in ಮತ್ತು ಕರ್ನಾಟಕ ಒನ್ ಆ್ಯಪ್ ಮೂಲಕ ಫಲಿತಾಂಶ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮತ್ತು ಎಸ್ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಮತ್ತು ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಏ. 9 ರಂದು ಮಧ್ಯಾಹ್ನ 3ಕ್ಕೆ ಲಭ್ಯಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಫೆ.28ರಿಂದ ಮಾ.17ರವರೆಗೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆದಿದ್ದವು










