ಬೆಂಗಳೂರು: ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರ ಭಾನುವಾರ ಸಂಜೆ 6 ಗಂಟೆಗೆ ತೆರೆ ಬಿದ್ದಿದೆ.
ಮೇ 7 ರಂದು ಈ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಬಹಿರಂಗ ಪ್ರಚಾರ
ಅಂತ್ಯಗೊಂಡಿದೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 227 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಈ ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.
ಈ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಅಣ್ಣಾಸಾಹೇಬ್ ಜೊಲ್ಲೆ, ಪ್ರಿಯಾಂಕಾ ಜಾರಕಿಹೊಳಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ, ಭಗವಂತ ಖೂಬಾ, ಸಾಗರ್ ಖಂಡ್ರೆ, ಶ್ರೀರಾಮುಲು, ಪ್ರಭಾ ಮಲ್ಲಿಕಾರ್ಜುನ, ಗಾಯತ್ರಿ ಸಿದ್ದೇಶ್ವರ್, ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ, ಗೀತಾ ಶಿವರಾಜ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿ ಪ್ರಮುಖರು ಚುನಾವಣಾ ಕಣದಲ್ಲಿದ್ದಾರೆ.













