ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ, ಉಡುಪಿ ಜಿಲ್ಲೆ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು
ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.ಮಾರ್ಚ್ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7.13ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು., ರಾಜ್ಯದಲ್ಲಿ ಈ ಬಾರಿ ಶೇ 73.45 ತೇರ್ಗಡೆಯಾಗಿದ್ದಾರೆ. ಸರ್ಕಾರಿ ಕಾಲೇಜುಗಳ ಶೇ 57 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅನುದಾನಿತ ಕಾಲೇಜುಗಳಲ್ಲಿ ಶೇ 67, ಅನುದಾನರಹಿತ ಕಾಲೇಜುಗಳಲ್ಲಿ ಶೇ 82 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ
ವಿದ್ಯಾರ್ಥಿಗಳುವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.www.karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು.