ಬೆಂಗಳೂರು: ಕಳೆದ ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಫಲಿತಾಂಶ ಇಂದು ಪ್ರಕಟಗೊಂಡಿದೆ.ಈ ಬಾರಿ ದ್ವಿತೀಯ ಪಿಯುಸಿ 81.15% ಫಲಿತಾಂಶ ಬಂದಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (80.25%) ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ
89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (96.80%) ಎರಡನೇ ಸ್ಥಾನ ಪಡೆದಿದೆ. ವಿಜಯಪುರ (94.89%) ತೃತೀಯ ಸ್ಥಾನ ಪಡೆದಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್ಸೈಟ್ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.