ದರ್ಬನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಕಡಿಮೆ ಮೊತ್ತಕ್ಕೆ ಕುಸಿದಿದೆ. ಸೆಂಟ್ ಜಾರ್ಜ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ
20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿದೆ. ಭಾರತದ ಪರ ಹಾರ್ದಿಕ್ ಪಾಂಡ್ಯ 39 ರನ್, ಅಕ್ಷರ್ ಪಟೇಲ್ 27 ರನ್, ತಿಲಕ್ ವರ್ಮ 20 ರನ್ ಭಾರಿಸಿದರು. ಕಳೆದ ಪಂದ್ಯದಲ್ಲಿ ಶತಕ ಭಾರಿಸಿದ್ದ ಸಂಜು ಸಸಮ್ಸನ್ ಶೂನ್ಯಕ್ಕೆ, ನಾಯಕ ಸೂರ್ಯಕುಮಾರ್ ಯಾದವ್ 4 ರನ್ ಹಾಗೂ ರಿಂಕು ಸಿಂಗ್ 9 ರನ್ ಭಾರಿಸಿದರು.ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 61ರನ್ಗಳ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.














