ಗೆಬರ್ಹ:ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯ ಇಂದು ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ನಡೆಯಲಿದೆ. ಮೊದಲ ಪಂದ್ಯ ಮಳೆಯ ಕಾರಣ ರದ್ದುಗೊಂಡಿತ್ತು.ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಹಾಗೂ
ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ಪಂದ್ಯ ರಾತ್ರಿ 8.30ರಿಂದ ನೋಡಬಹುದಾಗಿದೆ.
ಇಂದು ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತ ಟಿ20 ತಂಡ: ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ (ಉಪ ನಾಯಕ), ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಮುಖೇಶ್ ಕುಮಾರ್.









