ಗೆಬೆರ್ಹಾ (ದಕ್ಷಿಣ ಆಫ್ರಿಕಾ): ಭಾರತ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 19.3 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ180 ರನ್ ಗಳಿಸಿದೆ. ಈ ಸಂದರ್ಭದಲ್ಲಿ ಮಳೆ ಸುರಿದ ಕಾರಣ ಆಟ
ಸ್ಥಗಿತಗೊಂಡಿದೆ.ಭಾರತದ ಪರ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಅರ್ಧ ಶತಕ ಸಿಡಿಸಿದರು. ರಿಂಕು ಸಿಂಗ್ 39 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 68 ರನ್ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ತಿಲಕ್ ವರ್ಮಾ 29, ರವೀಂದ್ರ ಜಡೇಜ 19 ರನ್ ಗಳಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಜೊತೆ ಶುಭಮನ್ ಗಿಲ್ ಶೂನ್ಯ ಸುತ್ತಿದರು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು.
ಡರ್ಬನ್ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು.








