ವಿಶಾಖಪಟ್ಟಣಂ: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ 143 ರನ್ಗಳ ಮುನ್ನಡೆ ಕಾಯ್ದುಕೊಂಡಿದೆ. ಇಂಗ್ಲೆಂಡ್ ಪರ
ಆರಂಭಿಕ ಝಾಕ್ ಕ್ರೌಲಿ ಅತ್ಯಧಿಕ 76 ರನ್ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಬೆನ್ ಸ್ಟೋಕ್ಸ್ 47 ರನ್ಗಳ ಕೊಡುಗೆ ನೀಡಿದರು. ಬೌಲಿಂಗ್ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಟೀಂ ಇಂಡಿಯಾ 396 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದಿಂದ 6 ವಿಕೆಟ್ ಪಡೆದು ಟೆಸ್ಟ್ ಕ್ರಿಕೆಟ್ನಲ್ಲಿ 150 ವಿಕೆಟ್ಗಳ ಮೈಲಿಗಲ್ಲನ್ನು ದಾಟಿದ ಭಾರತದ 17ನೇ ಬೌಲರ್ ಎನಿಸಿಕೊಂಡರು. ಬುಮ್ರಾ ಹೊರತುಪಡಿಸಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು. ಇದೀಗ ಎರಡನೇ ದಿನವೇ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಕಲೆಹಾಕಿದೆ. ಆರಂಭಿಕರಾದ ಯಶಸ್ವಿ ಜೈಸ್ವಾಲ್ 15 ರನ್ ಹಾಗೂ ನಾಯಕ ರೋಹಿತ್ ಶರ್ಮಾ 13 ರನ್ ಸಿಡಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.









