ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಾಲ್ಯಾಂಡ್ನಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದು ಬಹುತೇಕ ಖಚಿತವಾಗಿದೆ. ಮೇಘಾಲಯದಲ್ಲಿ ಎನ್ಪಿಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ನಾಗಾಲ್ಯಾಂಡ್ನಲ್ಲಿ ಬಿಜೆಪಿ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ,
ತ್ರಿಪುರಾದಲ್ಲಿ 33 ಸ್ಥಾನಗಳಲ್ಲಿ ಮುಂದಿದೆ.ಮೇಘಾಲಯಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ 26 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ತ್ರಿಪುರಾದಲ್ಲಿ 15ರಲ್ಲಿ ಮುನ್ನಡೆ ಪಡೆದರೆ ಮೇಘಾಲಯದಲ್ಲಿ 5 ಮತ್ತು ನಾಗಾಲ್ಯಾಂಡ್ನಲ್ಲಿ 2 ಸ್ಥಾನಗಳಲ್ಲಿ ಮುಂದಿದೆ.
ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ, ನಾಗಾಲ್ಯಾಂಡ್ ಮತ್ತು ಮೇಘಾಲಯದ ತಲಾ 59 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ನಡೆದಿತ್ತು.