ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 3 ದಿನ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ನ.4ರಿಂದ 6ರ ವರೆಗೆ ಗುಡುಗು ಸಹಿತ
ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.4ರಿಂದ 7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಬುಧವಾರ, ಗುರುವಾರ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.