ಕೇಪ್ಟೌನ್:ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬಾರಿಸಿದ ಶತಕದ ನೆರವಿನಿಂದ ಭಾರತ ಉತ್ತಮ ಮೊತ್ತ ಪೇರಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿ
ದಕ್ಷಿಣ ಆಫ್ರಿಕಾಗೆ 297 ರನ್ ಗುರಿ ನೀಡಿದೆ. ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 108 ರನ್ ಗಳಿಸಿದೆ. ತಿಲಕ್ ವರ್ಮಾ 77 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದೆ. ರಿಂಕು ಸಿಂಗ್ ಕೊನೆಯ ಕ್ಷಣದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಿಂಕು ಸಿಂಗ್ 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 38 ರನ್ ಗಳಿಸಿದರು. ನಾಯಕ ಕೆ.ಎಲ್.ರಾಹುಲ್ 21 ರನ್, ರಜತ್ ಪಾಟೀದದಾರ್ 22 ರನ್ ಬಾರಿಸಿದರು. ಮೂರು ಪಂದ್ಯಗಳ ಸರಣಿಯಲ್ಲಿ 1–1ರಿಂದ ಸಮಬಲ ಸಾಧಿಸಿರುವ ಉಭಯ ತಂಡಗಳು ಈಗ ಕೊನೆಯದ್ದರಲ್ಲಿ ಜಯಿಸಿ ಕಿರೀಟ ಧರಿಸುವ ಛಲದಲ್ಲಿವೆ.












