ನವದೆಹಲಿ: ಮೂರನೇ ಹಂತದಲ್ಲಿ 11 ರಾಜ್ಯಗಳಲ್ಲಿ, ಲೋಕಸಭೆಯ 93 ಕ್ಷೇತ್ರಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ 62ರಷ್ಟು ಮತದಾನವಾಗಿದೆ. ಈ ಮೂಲಕ ಲೋಕಸಭೆಯ ಶೇ 50ರಷ್ಟು ಅಂದರೆ
283 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಂತಾಗಿದೆ.
ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಒಟ್ಟು 1,331 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ದಾಖಲಾಯಿತು.
ಕೇಂದ್ರ ಚುನಾವಣಾ ಆಯೋಗದ ಪ್ರಾಥಮಿಕ ಮಾಹಿತಿ ಪ್ರಕಾರ ರಾತ್ರಿ 8.30ರ ವೇಳೆಗೆ ಶೇ 61.73ರಷ್ಟು ಮತದಾನವಾಗಿದೆ. ಅಂತಿಮ ಲೆಕ್ಕಾಚಾರ ಬರುವಾಗ ಅಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ.