ಗುವಾಹಟಿ: ಭಾರತವು ಇಂದು ಆಸ್ಟ್ರೇಲಿಯಾ ಎದುರು ಮೂರನೇ ಟಿ20 ಪಂದ್ಯ ಆಡಲಿದೆ. ಸತತ ಎರಡು ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಕಂಡಿರುವ ಭಾರತದ ಯುವ ತಂಡ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಸೂರ್ಯಕುಮಾರ್ ಯಾದವ್ ನಾಯಕನಾಗಿ ಮೊದಲ ಸರಣಿ ಜಯದ ನಿರೀಕ್ಷೆಯಲ್ಲಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ರನ್ ಪ್ರವಾಹ ಹರಿಸಿರುವ
ಬ್ಯಾಟರ್ಗಳು ಭರ್ಜರಿ ಫಟರ್ಮ್ನಲ್ಲಿದ್ದಾರೆ. ಅಗ್ರ ಕ್ರಮಾಂಕದ ಮೂವರು ಬ್ಯಾಟರ್ಗಳಾದ ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ ಹಾಗೂ ಋತುರಾಜ್ ಗಾಯಕ್ವಾಡ್ ಅರ್ಧಶತಕ ಸಿಡಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದಾರೆ. ಪವರ್ಪ್ಲೇನಲ್ಲಿ ಯಶಸ್ವಿ ಜೈಸ್ವಾಲ್ ಆಟ ಮುಂದುವರಿದಿದೆ. ರಿಂಕು ಸಿಂಗ್ ಸ್ಲಾಗ್ ಓವರ್ಗಳಲ್ಲಿ ಉಪಯುಕ್ತ ಆಟದೊಂದಿಗೆ ಎರಡು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಎರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿರುವ ಭಾರತದ ಗೆಲುವಿನ ಕಾಂಬಿನೇಷನ್ನಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ. ಹಿಂದಿನ ಪಂದ್ಯ ತಂಡವನ್ನೇ ಉಳಿಸಿಕೊಂಡು ಸರಣಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.
ಆರಂಭ: ರಾತ್ರಿ 7
ನೇರಪ್ರಸಾರ: ಸ್ಪೋರ್ಟ್ಸ್ 18, ಜಿಯೋ ಸಿನಿಮಾ, ಡಿಡಿ.





