ನವದೆಹಲಿ: 4 ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ತಲಾ ಎರಡರಲ್ಲಿ ಕಾಂಗ್ರೆಸ್ ಮತ್ತು ಬಿಜೆಒಇ ಮುನ್ನಡೆ ಪಡೆದಿದೆ. ಮಧ್ಯಪ್ರದೇಶ ಮತ್ತು ರಾಜಸ್ತಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡರೆ, ಛತ್ತೀಸಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾರೀ
ಮುನ್ನಡೆ ಪಡೆದಿದ್ದಾರೆ. ರಾಜಸ್ಥಾನದ 199 ಕ್ಷೇತ್ರಗಳ ಪೈಕಿ ಬಿಜೆಪಿ 109ರಲ್ಲಿ, ಕಾಂಗ್ರೆಸ್ 78 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಮಧ್ಯಪ್ರದೇಶದಲ್ಲಿ 230 ಕ್ಷೇತ್ರಗಳ ಪೈಕಿ ಬಿಜೆಪಿ 127, ಕಾಂಗ್ರೆಸ್ 99 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ತೆಲಂಗಾಣದ 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಬಿಆರ್ಎಸ್ 40 ಕ್ಷೇತ್ರಗಳಲ್ಲಿ ಮುಂದಿದೆ. ಛತ್ತೀಸಗಢದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ. ಛತ್ತೀಸಗಢದ 90 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 57 ಮತ್ತು ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.
ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಕಾಮರೆಡ್ಡಿ ಮತ್ತು ಗಜ್ವೆಲ್ ಕ್ಷೇತ್ರಗಳಲ್ಲಿ ತಮ್ಮ ಎರಡೂ ಸ್ಥಾನಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.