ನವದೆಹಲಿ: 4 ರಾಜ್ಯಗಳ ಚುನಾವಣಾ ಮತ ಎಣಿಕೆ ಮುಂದುವರಿದಿದ್ದು ಬಿಜೆಪಿ-ಕಾಂಗ್ರೆಸ್ ಮಧ್ಯೆ ತೀವ್ರ ಹೋರಾಟ ಮುಂದುವರಿದಿದೆ. ಸದ್ಯ 3 ರಾಜ್ಯಗಳಲ್ಲಿ ಬಿಜೆಪಿ, ಒಂದು ಕಡೆ ಕಾಂಗ್ರೆಸ್ ಮುನ್ನಡೆಯಲ್ಲಿದೆ.
ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಫೈಪೋಟಿ ನಡೆದಿದೆ. ಬಿಜೆಪಿ 46, ಕಾಂಗ್ರೆಸ್ 40 ಸ್ಥಾನಗಳಲ್ಲಿ
ಮುನ್ನಡೆ ಸಾಧಿಸಿದೆ. ಇಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೆಕ್ ಟು ನೆಕ್ ಪೈಟ್ ನೀಡುತ್ತಿವೆ. ಪ್ರಸ್ತುತ, ಟ್ರೆಂಡ್ಗಳು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆಯನ್ನು ತೋರಿಸುತ್ತವೆ.ಛತ್ತೀಸ್ಗಢದಲ್ಲಿ ಬಹುಮತದ ಸ್ಪಷ್ಟ ಚಿತ್ರಣಕ್ಕೆ ಕಾದು ನೋಡಬೇಕಾಗಿದೆ.
ರಾಜಸ್ಥಾನದಲ್ಲಿ ಬಿಜೆಪಿ ಬಹುಮತ ಪಡೆಯುವತ್ತ ದಾಪುಗಾಲಿಟ್ಟಿದೆ. 200 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 69 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ 15 ಸ್ಥಾನವನ್ನು ಪಡೆದಿದೆ. ಪ್ರಸ್ತುತ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆಯುತ್ತಿತ್ತು. ಆದರೆ ಬಿಜೆಪಿ ಮ್ಯಾಜಿಕ್ ನಂಬರ್ ದಾಟುವ ಮೂಲಕವಾಗಿ ಅಧಿಕಾರದ ಚುಕ್ಕಾಣೆ ಹಿಡಿಯುವ ಸಾಧ್ಯತೆ ನಿಚ್ಛಳವಾಗಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಪಡೆಯುವತ್ತ ದಾಪುಗಾಲಿಟ್ಟಿದೆ. 230 ಸ್ಥಾನಗಳ ಪೈಕಿ ಬಿಜೆಪಿ 150, ಕಾಂಗ್ರೆಸ್ 70 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಕಾಂಗ್ರೆಸ್ 58, ಬಿಆರ್ಎಸ್ 33, ಬಿಜೆಪಿ 8 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.