ರಾಯ್ಪುರ:ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ174 ರನ್ ಗಳಿಸಿದೆ. 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿದ
ಳಲರಿಂಕು ಸಿಂಗ್ ಟಾಪ್ ಸ್ಕೋರರ್ ಆದರು. ಯಶಸ್ವಿ ಜೈಸ್ವಾಲ್ 28 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ 37 ರನ್, ಜಿತೇಶ್ ಶರ್ಮ 19 ಎಸೆತಗಳಲ್ಲಿ 3 ಸಿಕ್ಸರ್ ಒಂದು ಬೌಂಡರಿ ನೆರವಿನಿಂದ 35 ರನ್, ಋತುರಾಜ್ ಗಾಯಕ್ವಾಡ್ 28 ಎಸೆತಗಳಲ್ಲಿ 3 ಬೌಂಡರಿ 1 ಬೌಂಡರಿ ನೆರವಿನಿಂದ 32 ರನ್ ಬಾರಿಸಿದರು. ನಾಯಕ ಸೂರ್ಯಕುಮಾರ್ ಯಾದವ್ 1, ಶ್ರೇಯಸ್ ಅಯ್ಯರ್ 8 ರನ್ ಗಳಿಸಿದರು.ಇಂದಿನ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಎರಡೂ ತಂಡಗಳು ಕೆಲವೊಂದು ಬದಲಾವಣೆಗಳನ್ನು ಮಾಡಿದೆ.