ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಆರಂಭವಾಗಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸಿಸ್ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅಂತೋನಿ ಅಲ್ಬೇನಿಸ್ ಆಗಮಿಸಿದ್ದರು.ಇತ್ತೀಚಿನ ವರದಿ ಬಂದಾಗ
ಆಸ್ಟ್ರೇಲಿಯಾ 2 ವಿಕೆಟ್ ರಷ್ಟಕ್ಕೆ 149 ರನ್ ಗಳಿಸಿದೆ. 65 ರನ್ ಗಳಿಸಿದೆ ಉಸ್ಮಾನ್ ಖ್ವಜಾ ಹಾಗು 38 ರನ್ ಗಳಿಸಿದ ನಾಯಕ ಸ್ಟೀವನ್ ಸ್ಮಿತ್ ಕ್ರೀಸಿನಲ್ಲಿದ್ದಾರೆ.ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ.

ಆತಿಥೇಯ ಭಾರತವು ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ಬೌಲರ್ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಿದೆ. ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಸೇರ್ಪಡೆಯಾಗಿದ್ದಾರೆ.
ಬಾರ್ಡರ್–ಗಾವಸ್ಕರ್ ಟ್ರೋಫಿ ವಿಜಯ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪ್ರವೇಶದ ಗುರಿಗಳು ಈಡೇರಬೇಕಾದರೆ ಭಾರತ ತಂಡವು ನಾಲ್ಕನೇ ಟೆಸ್ಟ್ ಅನ್ನು ಗೆಲ್ಲಲೇಬೇಕಾಗಿದೆ.
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ: ಉಸ್ಮಾನ್ ಖ್ವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್ (ನಾಯಕ), ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್ಕಂಬ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಟ್ ಕುನೆಮನ್