ನವದೆಹಲಿ: ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ಅಂತಿಮ ಹಂತಕ್ಕೆ ಬಂದಿದ್ಸು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ,ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ, ಅಸ್ಸಾಂನಲ್ಲಿ ಬಿಜೆಪಿ, ಪುದುಚೇರಿಯಲ್ಲಿ ಎನ್ಡಿಎ, ಕೇರಳ ವಿಧಾನಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರದತ್ತ ಮುನ್ನಡೆದಿದೆ. ಪಶ್ಚಿಮ ಬಂಗಾಳದಲ್ಲಿ
294 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 194 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದು ಅಧಿಕಾರ ಖಚಿತಪಡಿಸಿಕೊಂಡಿದೆ.ಟಿಎಂಸಿ 92 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯ್ ನೇತೃತ್ವದ ಟಿವಿಕೆ 109 ಸ್ಥಾನ ಪಡೆದು ಅಧಿಕಾರ ಹಿಡಿಯುವತ್ತ ಸಾಗಿದೆ, ಎಡಿಎಂಕೆ 65, ಆಡಳಿತಾರೂಢ ಡಿಎಂಕೆ 60 ಸ್ಥಾನಗಳಲ್ಲಷ್ಟೇ ಮುನ್ನಡೆ ಸಾಧಿಸಿದೆ.
ಕೇರಳದಲ್ಲಿ140 ಸ್ಥಾನಗಳಲ್ಲಿ ಯುಡಿಎಫ್ 102 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಅಧಿಕಾರದತ್ತ ದಾಪುಗಾಲಿಟ್ಟಿದೆ. ಎಲ್ಡಿಎಫ್ 36 ಎನ್ಡಿಎ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲಿ 126 ಸ್ಥಾನಗಳಲ್ಲಿ ಬಿಜೆಪಿ 97 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ 25 ಸ್ಥಾನಗಳಲ್ಲಿ ಮುನ್ನಡೆ, ಪುದುಚ್ಚೇರಿಯಲ್ಲಿ ಎನ್ಡಿಎ 20, ಡಿಎಂಕೆ 7, ಟಿವಿಕೆ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.












