ನವದೆಹಲಿ: ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ ಶಾಂತಿಯುತವಾಗಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.56.68ರಷ್ಟು ಮತದಾನ ದಾಖಲಾಗಿದೆ.
ಕಳೆದ ನಾಲ್ಕು ಹಂತದ ಮತದಾನದ ವೇಳೆ
ಹೆಚ್ಚಿನ ಮತದಾನ ದಾಖಲಾಗಿತ್ತು. ಆದರೆ, ಐದನೇ ಹಂತದಲ್ಲಿ ಮತದಾನ ಪ್ರಮಾಣ ಭಾರಿ ಇಳಿಕೆಯಾಗಿದೆ. ಈ ಕುರಿತು ಚುನಾವಣೆ ಆಯೋಗ ಅಂಕಿ-ಅಂಶ ಬಿಡುಗಡೆ ಮಾಡಿದಾಗಲೇ ನಿಖರ ಮಾಹಿತಿ ಲಭ್ಯವಾಗಲಿದೆ.
ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್ನಲ್ಲಿ ಶೇ.67.15, ಜಾರ್ಖಂಡ್ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದೆ.
ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ರಾಯ್ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರು ಸ್ಪರ್ಧಿಸಿದ್ಶ ಕ್ಷೆತ್ರದಲ್ಲಿ ಇಂದು ಮತದಾನ ನಡೆದಿದೆ