ನವದೆಹಲಿ: ಆರು ರಾಜ್ಯಗಳಲ್ಲಿ ಏಳು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ. ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಹಾಗೂ ‘ಇಂಡಿಯಾ’ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಪಕ್ಷಗಳು ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿವೆ. ಮಾಜವಾದಿ ಪಕ್ಷವು ಉತ್ತರ ಪ್ರದೇಶದ ಘೋಸಿ ಕ್ಷೇತ್ರವನ್ನು ಉಳಿಸಿಕೊಂಡಿದೆ. ಡುಮ್ರಿ ಕ್ಷೇತ್ರದಲ್ಲಿ
ಜಾರ್ಖಂಡ್ ಮುಕ್ತಿ ಮೋರ್ಚಾವು ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದ ಧುಪ್ಗುರಿಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಜಯ ಗಳಿಸಿದೆ. ತ್ರಿಪುರದ ಬೊಕ್ಸಾನಗರ ಹಾಗೂ ಧನ್ಪುರ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕೇರಳದ ಪುದುಪಳ್ಳಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಮಾಜಿ ಸಿಎಂ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ ಗೆಲುವು ಸಾಧಿಸಿದ್ದಾರೆ. ಉತ್ತರಾಖಂಡದ ಬಾಗೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಒಟ್ಟಾರೆಯಾಗಿ ಬಿಜೆಪಿ ಒಂದು ಕ್ಷೇತ್ರವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಕೇರಳದ ಕ್ಷೇತ್ರವನ್ನು ಉಳಿಸಿಕೊಂಡಿದೆ. ಬಿಜೆಪಿ ಕ್ಷೇತ್ರವನ್ನು ಟಿಎಂಸಿ ಕಿತ್ತುಕೊಂಡಿದೆ. ಸಮಾಜವಾದಿ ಪಕ್ಷವು ಒಂದು ಸ್ಥಾನದಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ತ್ರಿಪುರದ 2 ಸ್ಥಾನ ಹಾಗೂ ಕೇರಳ, ಝಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ತಲಾ 1 ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.