ಸುಳ್ಯ:ವಿಧಾನಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಸಮಯ ಕೊನೆಗೊಂಡಾಗ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ನಾಮಪತ್ರ ಹಿಂಪಡೆದಿದ್ದಾರೆ. ಒಬ್ಬ ಪಕ್ಷೇತರ ಅಭ್ಯರ್ಥಿ
ಸೇರಿ ಎಂಟು ಮಂದಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕೃಷ್ಣಪ್ಪ, ಬಿಜೆಪಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್.ವೆಂಕಟೇಶ್, ಆಮ್ ಆದ್ಮಿ ಪಾರ್ಟಿಯ ಸುಮನಾ ಬೆಳ್ಳಾರ್ಕರ್, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸುಂದರ ಮೇರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಗಣೇಶ್ ಎಂ, ಉತ್ತಮ ಪ್ರಜಾಕೀಯ ಪಕ್ಷದಿಂದ ರಮೇಶ್.ಬಿ, ಪಕ್ಷೇತರ ಅಭ್ಯರ್ಥಿ ಗುರುವಪ್ಪ ಕಲ್ಲುಗುಡ್ಡೆ ಕಣದಲ್ಲಿದ್ದಾರೆ.