ಸುಳ್ಯ:ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್, ಯೋಜನಾ ಪ್ರಾಧಿಕಾರ ವ್ಯಾಪ್ತಿಯ 9/11 ಏಕ ನಿವೇಶನ ವಿನ್ಯಾಸ ಅನುಮೋದನೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ)ಕ್ಕೆ ವಹಿಸಿ ನಗರಾಭಿವೃದ್ಧಿ ಇಲಾಖೆ
ಆದೇಶ ಮಾಡಿದೆ. ಈ ಮೊದಲು 1 ಎಕ್ರೆ ವರೆಗಿನ 9/11 ಏಕ ನಿವೇಶನ ವಿನ್ಯಾಸಗಳಿಗೆ
ತಾಂತ್ರಿಕ ಅನುಮೋದನೆ ನೀಡುವ ಅಧಿಕಾರವನ್ನು ಪುತ್ತೂರು ನಗರ ಯೋಜನಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಸುಳ್ಯಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸದ್ರಿ ಆದೇಶವನ್ನು ಪರಿಷ್ಕರಿಸಿ ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್, ನಗರ ಯೋಜನಾ ಪ್ರಾಧಿಕಾರಕ್ಕೆ ಒಳಪಡುವ ವ್ಯಾಪ್ತಿಯ ಅನುಮೋದನೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರಕ್ಕೆ ವಹಿಸಲಾಗಿದೆ.
ಇದರಿಂದ ಸುಳ್ಯ ತಾಲೂಕಿನ ಜನರಿಗೆ ಹೆಚ್ಚಿನ ಪ್ರಯೋಜನ ವಾಗಲಿದೆ ಎಂದು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ತಿಳಿಸಿದ್ದಾರೆ.