ಸುಳ್ಯ:ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಸಮಯ ಕೊನೆಗೊಂಡಾಗ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು 11 ನಾಮಪತ್ರ ಸಲ್ಲಿಸಿದ್ದಾರೆ. ಏ.20 ರಂದು 3 ಗಂಟೆಗೆ ನಾಮಪತ್ರ ಸಲ್ಲಿಸುವ ಸಮಯ ಕೊನೆಗೊಂಡಿದೆ. ಇಂದು ನಾಲ್ಕು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.ಏ.13ಕ್ಕೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿತು. ಒಟ್ಟು 9 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ಜಿ.ಕೃಷ್ಣಪ್ಪ (ಎರಡು ಸೆಟ್ ನಾಮಪತ್ರ), ಬಿಜೆಪಿಯ ಭಾಗೀರಥಿ ಮುರುಳ್ಯ(ಎರಡು ಸೆಟ್ ನಾಮಪತ್ರ), ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್.ವೆಂಕಟೇಶ್, ಆಮ್ ಆದ್ಮಿ ಪಾರ್ಟಿಯ ಸುಮನಾ ಬೆಳ್ಳಾರ್ಕರ್, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸುಂದರ ಮೇರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಗಣೇಶ್ ಎಂ, ಉತ್ತಮ ಪ್ರಜಾಕೀಯ ಪಕ್ಷದಿಂದ ರಮೇಶ್.ಬಿ, ಪಕ್ಷೇತರರಾಗಿ ಸತೀಶ್ ಬೂಡುಮಕ್ಕಿ, ಗುರುವಪ್ಪ ಕಲ್ಲುಗುಡ್ಡೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರಗಳ ಪರಿಶೀಲನೆ ಏ.21ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ