ಸುಳ್ಯ:ಕಂದಾಯ ಇಲಾಖೆಯ ವತಿಯಿಂದ 94ಸಿ ಯೋಜನೆಯಡಿಯಲ್ಲಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಗುಂಡಡ್ಕದ 18 ಕುಟುಂಬಗಳಿಗೆ
ಹಕ್ಕು ಪತ್ರ ವಿತರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಹಕ್ಕುಪತ್ರ ವಿತರಿಸಿ ಮಾತನಾಡಿದರು.ತಹಶೀಲ್ದಾರ್ ಮಂಜುಳ.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಜ ಕಂದಾಯ ನಿರೀಕ್ಷಕ ರಂಜನ್ ಸ್ವಾಗತಿಸಿ, ಗ್ರಾಮ ಆಡಳಿತಾಧಿಕಾರಿ ಭಾರತಿ ವಂದಿಸಿದರು. 94ಸಿ ಯೋಜನೆಯ ವಿಷಯ ನಿರ್ವಾಹಕ ಕೌಶಿಕ್ ಮತ್ತಿತರರು ಸಹಕರಿಸಿದರು.












