ಕಲ್ಲಪಳ್ಳಿ: ಕಲ್ಲಪಳ್ಳಿ ಆಲುಗುಂಜದ ಎ.ಕೆ.ಸೋಮನಾಥ ಗೌಡ(76) ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ರಾತ್ರಿ ನಿಧನರಾದರು. ಆಲುಗುಂಜ ಮನೆತನದ ಹಿರಿಯರಾಗಿದ್ದ ಎ.ಕೆ. ಸೋಮನಾಥ ಗೌಡ ಪ್ರಗತಿಪರ ಕೃಷಿಕರಾಗಿದ್ದರು. ಪನತ್ತಡಿ ಪಂಚಾಯತ್ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪಡೆದಿದ್ದರು. ರಾಜಕೀಯ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಪತ್ನಿ, ಮೂರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.









