ಬೆಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ರಾಜಭವನದಲ್ಲಿ ನಡೆಯಲಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ಲಭಿಸಿದೆ.ವಿಧಾನಸಭೆಯ
ಸ್ಪೀಕರ್ ಸ್ಥಾನಕ್ಕೆ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ ಅವರ ಹೆಸರನ್ನು ಅಖೈರುಗೊಳಿಸಲಾಗಿದೆ. ಉಪ ಸಭಾಧ್ಯಕ್ಷ ಸ್ಥಾನಕ್ಕೆ ಎ.ಎಸ್ ಪೊನ್ನಣ್ಣ ಅವರ ಹೆಸರು ಅಂತಿಮವಾಗಿದೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. 20 ಮಂದಿ ಶಾಸಕರು ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.












