ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರು ಹಾಗೂ ಕೊಡಗಿನ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ನೂತನ ಕಚೇರಿ ಬೆಂಗಳೂರಿನ ವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಿತು. ಈ ಸಂದರ್ಭದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ದಕ್ಷಿಣ ಕನ್ನಡ ಜಿಲ್ಲಾ
ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಶಿತ್ ಜಿ.ಪಿರೇರಾ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ, ಕಾರ್ಮಿಕ ನಾಯಕರಾದ ಕೆ.ಪಿ.ಜಾನಿ ಮತ್ತು ಕಾಂಗ್ರೆಸ್ ಪ್ರಮುಖರಾದ ವಸಂತ ಗೌಡ ಪೆಲ್ತಡ್ಕ ಅವರು ಭಾಗಿಯಾಗಿ ಶುಭಾಶಯ ಕೋರಿದರು.