ಮಂಞಡುಕ್ಕ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಕರಿಕೆ ಮಂಞಡುಕ್ಕ ಶ್ರೀ ತುಳೂರ್ ವನತ್ ಭಗವತಿ ಕ್ಷೇತ್ರದಲ್ಲಿ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಕಳಿಯಾಟ ಮಹೋತ್ಸವದಲ್ಲಿ ಭಾಗವಹಿಸಿದರು. ದೈವಗಳು ಪೊನ್ನಣ್ಣ ಅವರನ್ನು ಆಶೀರ್ವದಿಸಿ ಹರಸಿದರು.ದೈವಗಳ

ಕೋಲವನ್ನು ವೀಕ್ಷಿಸಿ ಪೂಜೆ ಸಲ್ಲಿಸಿದ ಶಾಸಕರು, ನಾಡಿನ ಸರ್ವರಿಗೂ ಒಳಿತಾಗಲಿ ಎಂದು ಹಾರೈಸಿದರು. ಸಾರ್ವಜನಿಕರಿಗೆ ಊಟ ಬಡಿಸುತ್ತಾ ಸೇವೆ ಮಾಡಿದರು. ಈ ಸಂದರ್ಭದಲ್ಲಿ ಕರಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್,
ವಲಯ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ಹರಿಪ್ರಸಾದ್, ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಶ್ರೀನಿವಾಸ್, ಮಿಥುನ್ ಹೊಸಮನೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.







