ಸುಳ್ಯ:ಆದಿದ್ರಾವಿಡ ಯುವ ವೇದಿಕೆ ದ. ಕ ಹಾಗೂ ಸುಳ್ಯ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಸಮಿತಿ ಮತ್ತು ಗ್ರಾಮ ಘಟಕ ಸಮಿತಿಗಳ ನೇತೃತ್ವದಲ್ಲಿ ನಡೆಯುವ ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸುಳ್ಯದ
ಗಾಂಧಿನಗರ ನಾವೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿಯ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಅ.29ರಂದು ಐವನಾ೯ಡು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ ನ.5ರಂದು ಕೆ.ವಿ.ಜಿ ಪುರಭವನದಲ್ಲಿ ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.









