ಸಂಪಾಜೆ:ಸಂಪಾಜೆ ಸಹಿತ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಕೃಷಿ ತೋಟಕ್ಕೆ ಧಾಳಿ ಮಾಡಿ ಕೃಷಿ ನಾಶ ಪಡಿಸುತ್ತಿದೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ಆಗಬೇಕು ಎಂದು ಸಂಪಾಜೆ ಕಾಂಗ್ರೆಸ್ ನಿಯೋಗ ಅರಣ್ಯ ಸಚಿವ ಈಶ್ವತ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ಬೆಂಗಳೂರಿನಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಭೇಟಿ ಮಾಡಿದ ಸಂಪಾಜೆಯ ನಾಯಕರು ಸುಳ್ಯ ತಾಲೂಕಿನಲ್ಲಿ ಆನೆ ಹಾವಳಿ
ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ದಕ್ಷಿಣ ಕನ್ನಡ ಜಿಲ್ಲೆಗೆ ಎಲಿಪೇಂಟ್ ಟಾಸ್ಕ್ ಫೋರ್ಸ್ ನೇಮಕ ಮಾಡಬೇಕು. ಕೃಷಿಕರಿಗೆ ಈ ಭಾಗದಲ್ಲಿ ಆನೆ ಹಾವಳಿಯಿಂದ ವ್ಯಾಪಕ ಹಾನಿಯಾಗಿದ್ದು ಕೃಷಿ ಹಾನಿಗೆ ಪರಿಹಾರ ಧನ ಒದಗಿಸಬೇಕು. ಸೋಲಾರ್ ಬೇಲಿ ನಿರ್ಮಾಣಕ್ಕೆ ಸಹಾಯದನ ಹೆಚ್ಚಳ ಮಾಡಬೇಕು, ಸಂಪಾಜೆ ಗ್ರಾಮದ ಸ್ಮಶಾನ ಜಾಗದ ಸಮಸ್ಯೆಗಳು, ಕಸ ವಿಲೇವಾರಿ ಜಾಗದ ಸಮಸ್ಯೆಗಳು, ದಿನ ನಿತ್ಯ ಸಾರ್ವಜನಿಕರು, ಶಾಲಾ ಮಕ್ಕಳು ಭಯದಲ್ಲಿ ತೇರಳಬೇಕಾದ ಸಮಸ್ಯೆ ಇದ್ದು ಸಚಿವರ ಗಮನಕ್ಕೆ ತರಲಾಯಿತು. ಸಚಿವರು ಮನವಿ ಸ್ವೀಕರಿಸಿದ ನಂತರ ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಭರವಸೆಯನ್ನು ಸಚಿವರು ನೀಡಿದರು.

ಕೆಪಿಸಿಸಿ ವಕ್ತಾರಾರಾದ ಟಿ. ಎಂ. ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ. ಹಮೀದ್ ಗೂನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ,ಯುವ ಕಾಂಗ್ರೆಸ್ ಮುಖಂಡ ರಂಜಿತ್ ರೈ ಮೇನಾಲ, ಸಲೀಂ ಪೆರುಂಗೋಡಿ, ಉನೈಸ್ ಗೂನಡ್ಕ, ಸೌಕತ್ ಮೇನಾಲ, ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜಾವೀದ್ ಅಕ್ತರ್ ಉಪಸ್ಥಿತರಿದ್ದರು.





