ಸುಳ್ಯ: ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು ಗ್ರಾಮದಲ್ಲಿ ವ್ಯಾಪಕ ಕೃಷಿ ಹಾನಿಯ ಜೊತೆಗೆ ಜನರು ಜೀವ ಭಯದಿಂದ ದಿನ ಕಳೆಯುವಂತಾಗಿದೆ. ಆದುದರಿಂದ ಕಾಡಾನೆ ಹಾವಳಿ ತಡೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ ಶಾಸಕರ ಮೂಲಕ ಸರ್ಕಾರಕ್ಕೆ
ಮನವಿ ಸಲ್ಲಿಸಲಾಗಿದೆ. ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಭೇಟಿಯಾದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮನವಿ ಸಲ್ಲಿಸಿದ್ದಾರೆ.ಮುರೂರು-ಮಂಡೆಕೋಲು ಮುಖ್ಯ ರಸ್ತೆಯಲ್ಲಿ ಕೆಲವು ಭಾಗದಲ್ಲಿ ಅಭಿವೃದ್ಧಿಗೆ ಬಾಕಿ ಉಳಿದಿದ್ದು ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗಿದೆ.
ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಉಪಾಧ್ಯಕ್ಷೆ ಪ್ರತಿಮ ಹೆಬ್ಬಾರ್, ಮಾಜಿ ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ, ಸದಸ್ಯ ಬಾಲಚಂದ್ರ ದೇವರಗುಂಡ ಅವರ ನೇತೃತ್ವದ ನಿಯೋಗ ಶಾಸಕರ ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚೆ ನಡೆಸಿದರು.
ಹಿರಿಯರಾದ ಎಸ್.ಎನ್.ಮನ್ಮಥ, ಎನ್.ಎ.ರಾಮಚಂದ್ರ, ನಿತ್ಯಾನಂದ ಮುಂಡೋಡಿ, ಸಂತೋಷ್ ಜಾಕೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.