ಸುಳ್ಯ:ಸುಳ್ಯ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕೆದ ಏ.18 ರಂದು ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಮಿನಿ ವಿಧಾನ ಸೌಧದಲ್ಲಿನ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಅರುಣ್ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಅಭ್ಯರ್ಥಿ ಜೊತೆ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ಮುಖಂಡರಾದ ರಶೀದ್ ಜಟ್ಟಿಪಳ್ಳ, ಖಲಂದರ್ ಎಲಿಮಲೆ, ಗುರುಪ್ರಸಾದ್ ಮೇರ್ಕಜೆ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.