ಪುತ್ತೂರು:ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ
ಉದ್ಘಾಟಿಸಿದರು. ಹಿರಿಯರಾದ ಬಿ ಪುರಂದರ ಭಟ್, ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಎಎಪಿ ಜಿಲ್ಲಾಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ.ಬಿ.ಕೆ ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ, ಸಂಘಟನಾ ಉಸ್ತುವಾರಿ ಜನಾರ್ಧನ ಬಂಗೇರ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಮಹಮ್ಮದ್ ಆಲಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕರ್ತರ ಸಭೆ:
ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ವಿವೇಕಾನಂದ ಸಾಲಿನ್ಸ್, ಆಮ್ ಆದ್ಮಿ ಪಕ್ಷದ ದ ಕ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಡಾ.ವಿಷುಕುಮಾರ್ ಮಾತನಾಡಿದರು. ಎಎಪಿ ಜಿಲ್ಲಾಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಪ್ರಸ್ತಾವನೆಗೈದರು. ಸಂಘಟನಾ ಉಸ್ತುವಾರಿ ಜನಾರ್ಧನ ಬಂಗೇರ ಸ್ವಾಗತಿಸಿದರು.ಆಮ್ ಆದ್ಮಿ ಪಾರ್ಟಿ ಅಲ್ಪಸಂಖ್ಯಾತ ಮೋರ್ಛಾ ಅಧ್ಯಕ್ಷ ಮಹಮ್ಮದ್ ಆಲಿ ವಂದಿಸಿದರು.