ಸುಳ್ಯ:ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಸೆ.1ರಂದು ರಾಯರ 352 ನೇ ವರ್ಷದ ಆರಾಧನಾ ಮಹೋತ್ಸವದ ಅಂಗವಾಗಿ ಭಕ್ತಿ ಶ್ರದ್ಧೆಯಿಂದ ರಾಯರ ಆರಾಧನೆ ನಡೆಯಿತು. ಸುಳ್ಯದ ರಾಘವೇಂದ್ರ ಮಠದಲ್ಲಿ 7ನೇ ವರ್ಷದ ಆರಾಧನಾ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಂಜೆ
ಪಲ್ಲಕ್ಕಿ ಸೇವೆ, ತೊಟ್ಟಿಲು ಸೇವೆ, ಅಷ್ಟಾವಧಾನ ಸೇವೆಯು ವಿಜೃಂಭಣೆಯಿಂದ ನಡೆಯಿತು. ಆರಾಧನಾ ಮಹೋತ್ಸವದ ಅಂಗವಾಗಿ

ಬೆಳಗ್ಗೆ ಗರ್ಭಗುಡಿಯ ಬಾಗಿಲಿಗೆ ಹಿತ್ತಾಳೆ ಕವಚ ಸಮರ್ಪಣೆ ನಡೆದು ಬಳಿಕ ವೈದಿಕ ಕಾರ್ಯಕ್ರಮದ ಅಂಗವಾಗಿ ಗಣಪತಿ ಹವನ ,ಪವಮಾನ ಹೋಮ, ಪವಮಾನ ಅಭಿಷೇಕ ನೆರವೇರಿತು.ಬ್ರಾಹ್ಮಣಾರಾಧನೆಯಾಗಿ ಮಹಾಪೂಜೆ ನಡೆದು ಮಂತ್ರಾಕ್ಷತೆ ಯೊಂದಿಗೆ ಪ್ರಸಾದ ವಿತರಣೆ ನಡೆಯಿತು. ರಾಜೇಶ್ ರೈ ಮೇನಾಲ ಅವರಿಂದ ‘ಮಾರುತಿ ಮಹಿಮೆ’ ಎಂಬ ಹರಿಕಥಾ ಕಾಲಕ್ಷೇಪ ನಡೆಯಿತು. ಸಂಜೆ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ರಾತ್ರಿ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಗಿ ಅನ್ನ ಸಂತರ್ಪಣೆ ನಡೆದು ಆರಾಧನಾ ಮಹೋತ್ಸವ ಸಂಪನ್ನಗೊಂಡಿತು.

ಬೃಂದಾವನ ಸೇವಾ ಟ್ರಸ್ಟ್ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ, ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಖಜಾಂಜಿ ಮುರಳೀಕೃಷ್ಣ, ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಅಧ್ಯಕ್ಷ ರಾಮ್ ಕುಮಾರ್ ಹೆಬ್ಬಾರ್, ಕಾರ್ಯದರ್ಶಿ ನವೀನ ಸೋಮಯಾಗಿ, ಮಾಜಿ ಅಧ್ಯಕ್ಷ ಗಂಗಾಧರ ಮಟ್ಟಿ, ಟ್ರಸ್ಟಿಗಳಾದ ಪ್ರಕಾಶ್ ಮೂಡಿತ್ತಾಯ, ಮಹೇಶ್ ಕುಮಾರ್, ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ಸೋಮಯಾಗಿ ಮತ್ತಿತರರು ಉಪಸ್ಥಿತರಿದ್ದರು.