ಸುಳ್ಯ:ಪ್ರಧಾನಿ ನರೇಂದ್ರ ಮೋದಿ ಅವರ ಅಯುಷ್ಮಾನ್ ಯೋಜನೆಯಲ್ಲಿ ರಾಜ್ಯ ಸರಕಾರದ ಸಹಯೋಗದೊಂದಿಗೆ ಆಲೆಟ್ಟಿ ಗ್ರಾಮದ ಕೋಲ್ಚಾರು ಮತ್ತು ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯಲ್ಲಿ ಆರೋಗ್ಯ ಮತ್ತು ಕ್ಷೆಮ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗು
ಶಾಸಕಿ ಭಾಗೀರಥಿ ಮುರುಳ್ಯ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರಾದ ಎ.ವಿ.ತೀರ್ಥರಾಮ, ಹರೀಶ್ ಕಂಜಿಪಿಲಿ,ವೆಂಕಟ್ ದಂಬೆಕೋಡಿ, ಸುಬೋದ್ ಶೆಟ್ಟಿ ಮೇನಾಲ, ವಿಕ್ರಂ ಅಡ್ಪಂಗಾಯ, ವಿನಯಕುಮಾರ್ ಮುಳುಗಾಡು, ಎ.ಟಿ.ಕುಸುಮಾಧರ, ಶ್ರೀಕಾಂತ್ ಮಾವಿನಕಟ್ಟೆ ಸೇರಿ ಪ್ರಮುಖರು ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಹಾಗೂ ಆಲೆಟ್ಟಿ ಗ್ರಾಮದ ಕೋಲ್ಚಾರ್ನಲ್ಲಿ ತಲಾ 65 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣ ನಡೆಯಲಿದೆ.ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡಿದೆ.











