ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಜನವರಿಯಿಂದ ಮಾಸಿಕ 2,000 ಗೌರವಧನ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್, ಆಶಾ ಕಾರ್ಯಕರ್ತೆಯರಿಗೆ
ಜನವರಿ 1ರಿಂದ ಮಾಸಿಕ ರೂ.2,000 ಗೌರವಧನ ಹೆಚ್ಚಿಸಲಾಗುವುದು. ಅವರ ಸೇವೆಯನ್ನು ಗೌರವಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಮಾಸಿಕ 15,000 ರೂ. ಗೌರವಧನಕ್ಕೆ ಆಗ್ರಹಿಸಿ ಕಳೆದ 12 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆ ಹಿಂಪಡೆಯಲಾಗಿದೆ.

















