ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಇವರ ಆಶ್ರಯದಲ್ಲಿ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ, ಕನ್ನಡ ಸಂಘ, ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಸಹಯೋಗದೊಂದಿಗೆ ‘ಆಟಿನ ನೆನಪು – ಸಂಪ್ರದಾಯದ ಮೆಲುಕು’ ಎಂಬ ಶೀರ್ಷಿಕೆಯಲ್ಲಿ
ಆಟಿ ಆಚರಣೆ ಕಾಲೇಜಿನ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.
ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ. ಎನ್ ಎ ಜ್ಞಾನೇಶ್ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ರಂಗಭೂಮಿ ಕಲಾವಿದೆ ದೇವಜನ ಗೀತಾ ಮೋಂಟಡ್ಕ ಮುಖ್ಯ ಭಾಷಣ ಮಾಡಿದರು.ಕಾಲೇಜಿನ

ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು , ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ, ಅಕಾಡೆಮಿ ಸದಸ್ಯೆ ಲತಾ ಪ್ರಸಾದ್ ಕುದ್ರಾಜೆ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ.ಮಮತಾ ಕೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶಶ್ಮಿ ಭಟ್, ಕಾರ್ಯಕ್ರಮ ಸಂಘಟಕಿ, ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಅನುರಾಧಾ ಕುರುಂಜಿ ಉಪಸ್ಥಿತರಿದ್ದರು.
ರೆಡ್ ಕ್ರಾಸ್ ಸದಸ್ಯರಾದ ಹವ್ಯಾ, ಧೃತಿ, ಕೃತಿ, ಸೌಪರ್ಣಿಕಾ ಪ್ರಾರ್ಥಿಸಿ, ಅಕಾಡೆಮಿಯ ಸದಸ್ಯ ಸಂಚಾಲಕಿ ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿದರು. ಕಾರ್ಯಕ್ರಮ ಸಂಘಟಕಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಪ್ರೇಮಲತಾ ಎಂ ವಂದಿಸಿ ರೆಡ್ ಕ್ರಾಸ್ ಸದಸ್ಯರಾದ ಪ್ರತೀಕ್ಷಾ ಹಾಗೂ ಮೋನಿಷಾ ನಿರೂಪಿಸಿದರು.ಜಯಪ್ರಕಾಶ್ ಕುಕ್ಕೆಟ್ಟಿ ತೀರ್ಪುಗಾರರಾಗಿದ್ದರು. ಕಾರ್ಯಕ್ರಮದಲ್ಲಿ ಆಟಿ ಕಳೆಂಜ ಪ್ರದರ್ಶನ, ವಸ್ತು ಪ್ರದರ್ಶನ, ಆಟಿ ಆಹಾರ ಮೇಳ, ಚೆನ್ನೆಮಣೆ ಸ್ಪರ್ಧೆ, ಸೋಬಾನೆ ಸ್ಪರ್ಧೆ ಮೊದಲಾದ ಕಾರ್ಯಕ್ರಮಗಳು ನಡೆಯಿತು.





































