ಸುಳ್ಯ: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ ಸುಳ್ಯ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಸುಳ್ಯ ಇದರ ವತಿಯಿಂದ ಆಟಿ ಕೂಟ, ಆಹಾರ, ಪೌಷ್ಠಿಕತೆ, ಆರೋಗ್ಯ, ನೀರು ಮತ್ತು ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಮಂಜುಳಾ,ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರವಿಚಂದ್ರ, ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ರಾಜಲಕ್ಷ್ಮಿ, ಶಾಸಕರ ಆಪ್ತ ಕಾರ್ಯದರ್ಶಿ ಹರೀಶ್, ಕೆನರಾ ಬ್ಯಾಂಕ್ನ ಆಪ್ತ ಸಮಾಲೋಚಕಿ ಸುಜಾತ, ಮತ್ತಿತರರು ಉಪಸ್ಥಿತರಿದ್ದರು.

ಸಂಜೀವಿನಿ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇಥ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಆಟಿ ಕೂಟದ ಅಂಗವಾಗಿ ತಾಲೂಕಿನ ಎಲ್ಲಾ ಸಂಜೀವಿನಿ ಒಕ್ಕೂಟದ ಸದಸ್ಯರು ಮನೆಯಲ್ಲಿ ತಯಾರಿಸಿದ ವಿವಿಧ ಆಹಾರ ಉತ್ಪನ್ನಗಳನ್ನು ಉಣ ಬಡಿಸಲಾಯಿತು. ಪ್ರಾಕೃತಿಕವಾಗಿ ಲಭಿಸುವ ವಿವಿಧ ಉತ್ಪನ್ನಗಳನ್ನು ಬಳಸಿ ವೂವಿಧ್ಯಮಯ ಖಾದ್ಯಗಳನ್ನು ತಯಾರಿಸಿ ಪ್ರದರ್ಶಿಸಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನದ ಪರಿವರ್ತನೆ ಪೋಸ್ಟರ್ ಬಿಡುಗಡೆ ಮಾಡಲಾಯಿತು.





