ಸುಳ್ಯ:ಅರೆಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುವ ಉದ್ದೇಶದಿಂದ ಅಕಾಡೆಮಿ ವತಿಯಿಂದ ನಿರಂತರ ಕಾರ್ಯಕ್ರಮಗಳನ್ಬು ಹಮ್ಮಿಕೊಂಡು ಬರಲಾಗುತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಆಟಿ ತಿಂಗಳ ವಿಶೇಷ ಕಾರ್ಯಕ್ರಮ ಆಟಿ ನೆಂಪು-2026 ಸಂಭ್ರಮದ
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಡಿನಾಡ ಉತ್ಸವ, ಆಟಿ ಸಂಭ್ರಮ ಸೇರಿದಂತೆ ವೈವಿಧ್ಯಮಯ ಮತ್ತು ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಅರೆಭಾಷೆ ಅಕಾಡೆಮಿ ಎಲ್ಲರನ್ನು ಮುಟ್ಟುವ ಪ್ರಯತ್ನ ಮಾಡಿದೆ. ಇದರಿಂದ ಅರೆಭಾಷೆಯು ಸರ್ವ ವ್ಯಾಪಿಯಾಗಿದೆ ಎಂದು ಹೇಳಿದರು.
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಮಾತನಾಡಿ ‘ಮಾನವೀಯತೆ ಮತ್ತು ಎಲ್ಲರನ್ನು ಗೌರವಿಸುವ ಗುಣ ಹಾಗು ಎಲ್ಲರನ್ನು ಒಳಗೊಳ್ಳುವ ಮನೋಭಾವ ಇದ್ದರೆ ಭಾಷೆ, ಸಂಸ್ಕೃತಿ ತನ್ನ ಸೀಮೆಯನ್ನು ಮೀರಿ ಎತ್ತರಕ್ಕೆ ಬೆಳೆಯುತ್ತದೆ ಎಂದು ಹೇಳಿದರು.

ನಿವೃತ್ತ ಶಿಕ್ಷಕಿ ಚಂದ್ರಮತಿ.ಕೆ ಮುಖ್ಯ ಭಾಷಣ ಮಾಡಿದರು. ಪ್ರಕೃತಿಯನ್ನು ಪೋಷಿಸಿ, ಸಂಪ್ರದಾಯ ಆಚರಣೆಗಳನ್ನು ಉಳಿಸಿಕೊಂಡು ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಅವರು ಹೇಳಿದರು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ಕುಮಾರ್ ಕರಿಕ್ಕಳ,ಜೇಸಿಐ ವಲಯ ಸಂಯೋಜಕ ಭಾಗೇಶ್ ರೈ, ಲಯನ್ಸ್ ಜಿಲ್ಲಾ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯರಾಮ ದೇರಪ್ಪಜ್ಜನಮನೆ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅರೆಭಾಷೆ ಅಕಾಡೆಮಿ ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು, ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ,
ಕಾರ್ಯಕ್ರಮದ ಸಂಯೋಜಕರಾದ ವಿಜೇಶ್ ಹಿರಿಯಡ್ಕ, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ, ಕಾರ್ಯದರ್ಶಿ ಪ್ರಕಾಶ್ ಅಳ್ಪೆ, ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಗೌಡ ಜಳಕದಹೊಳೆ
ಕಾರ್ಯದರ್ಶಿ ವಾಸುದೇವ ಮೇಲ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚಂದ್ರಶೇಖರ ಪೇರಾಲು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸೋಮಶೇಖರ ನೇರಳ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಕೌಶಿಕ್ ಕುಳ ಕಾರ್ಯಕ್ರಮ ನಿರೂಪಿಸಿದರು.











