ಸುಳ್ಯ:ಕರ್ನಾಟಕ ರಾಜ್ಯ ಅದಿದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ಮತ್ತು ಕರ್ನಾಟಕ ರಾಜ್ಯ ಆದಿ ದ್ರಾವಿಡ ಮಹಿಳಾ ಸಮಿತಿ ಸುಳ್ಯ ಘಟಕ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯು ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ತಾಲೂಕು ಸಮಿತಿಯ
ಅಧ್ಯಕ್ಷ ಬಾಲಕೃಷ್ಣ ದೊಡ್ಡೇರಿ ವಹಿಸಿದ್ದರು. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ಅರ್ಬಿಗುಡ್ಡೆ, ಕಾರ್ಯದರ್ಶಿ ರಮೇಶ್ ಉಳ್ಳಾಳ, ಜಿಲ್ಲಾ ಗೌರವ ಸಹಲಹೆಗಾರ ವಿಜಯ ಆಲಡ್ಕ, ತಾಲೂಕು ಸಂಘದ ಮಾಜಿ ಅಧ್ಯಕ್ಷ ಮೋನಪ್ಪ ರಾಜಾರಾಂಪುರ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕೊಡಿಯಾಲ್ ಬೈಲ್ ಸ್ಮಶಾನ ನಿರ್ವಾಹಣೆ ಮಾಡುವ ಗುರುವ ಕುತ್ತಮೊಟ್ಟೆ ಮತ್ತು ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಾದ ಬಿಜಿಲ ನಾವೂರು ಇವರನ್ನು ಸನ್ಮಾನಿಸಲಾಯಿತು. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಆರೋಗ್ಯ ಕ್ರೇತ್ರದಲ್ಲಿ ಆರೋಗ್ಯ ಸಹಾಯಕಿಯರಾಗಿ ಕರ್ತವ್ಯ ನಿರ್ವಹಿಸುತ್ತಿರುವುವವನನ್ನು ಗುರುತಿಸಿ ಗೌರವಿಸಲಾಯಿತು.