ವಿಟ್ಲ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ ‘ಆಟಿಲೊಂದು ದಿನ’ ಕಾರ್ಯಕ್ರಮ ವಿಟ್ಲದ ‘ಅಕ್ಷಯ ಭವನ’ದಲ್ಲಿ ನಡೆಯಿತು. ಅರೆಭಾಷೆ ಅಕಾಡೆಮಿಯ
ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ನಿಕಟ ಪೂರ್ವ ಅಧ್ಯಕ್ಷೆ ಸೌಮ್ಯ ಸುಕುಮಾರ್ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾಗಿದ್ದ ವಿಶ್ರಾಂತ ಪ್ರಾಂಶುಪಾಲ ಮತ್ತು ಜೇಸೀ ರಾಷ್ಟ್ರೀಯ ತರಬೇತುದಾರರಾದ ಸೀತಾರಾಮ ಕೇವಳ ಪ್ರಧಾನ ಉಪನ್ಯಾಸ ನೀಡಿದರು.ವಿಟ್ಲ ಮಹಿಳಾ ಘಟಕದ ಅಧ್ಯಕ್ಷೆ ಅಮಿತಾಕೃಷ್ಣ ಕೊಡಿಪಾಡಿಗುತ್ತು ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದ ಅಂಗವಾಗಿ
ವಿಶೇಷ ಸಾಂಸ್ಕೃತಿಕ ಪ್ರದರ್ಶನ, ಅರೆಭಾಷೆ ಹಾಡು, ಸೋಬಾನೆಗಳ ಗಾಯನ, ಮದುವೆಯಲ್ಲಿ ಹೆಣ್ಣಿಳಿಸಿಕೊಡುವ ಸಾಹಿತ್ಯ ಗಾಯನ ಸ್ಪರ್ಧೆಗಳು, ನೃತ್ಯ ಮತ್ತು ನೃತ್ಯ ರೂಪಕಗಳ ಪ್ರದರ್ಶನಗಳು ನಡೆಯುತು.ಸುಮಾರು 45 ಬಗೆಗಳ ಆಟಿ ಖಾದ್ಯಗಳನ್ನು ಆಗಮಿಸಿದ ಸರ್ವರಿಗೂ ಬಡಿಸಲಾಯಿತು. ಇವೆಲ್ಲವುಗಳನ್ನು ಸಂಘದ ಸದಸ್ಯರು ಅವರವರ ಮನೆಗಳಲ್ಲಿ ತಯಾರಿಸಿ ತಂದದ್ದು ವಿಶೇಷವಾಗಿತ್ತು.
ದಂಪತಿಗಳ ನಡಿಗೆ ಮತ್ತು ನೃತ್ಯ ಸ್ಪರ್ಧೆ ಗಮನ ಸೆಳೆಯಿತು.
ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕಣ್ಕಲ್, ಗೌರವಾಧ್ಯಕ್ಷ ಗಿರಿಯಪ್ಪ ಗೌಡ ಶಾಂತಿಲ, ಗೌಡರ ಯುವ ವೇದಿಕೆ ಅಧ್ಯಕ್ಷ ದಿನೇಶ್ ಮಾಡ್ತೇಲ್, ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ, ವೇದಿಕೆಯಲ್ಲಿ ಉಪಸ್ಥಿತರಿದ್ದರು.ಅಕಾಡೆಮಿ ಸದಸ್ಯೆ ಸಂಚಾಲಕಿ ಲತಾಪ್ರಸಾದ್ ಕುದ್ಪಾಜೆ ಸ್ವಾಗತಿಸಿ ಪ್ರಸ್ತಾವಿಕ ಮಾತನಾಡಿದರು. ವಿಟ್ಲ ಗೌಡ ಮಹಿಳಾ ಘಟಕಾಧ್ಯಕ್ಷೆ ಅಮಿತಾಕೃಷ್ಣ ಕುಡಿಪ್ಪಾಡಿಗುತ್ತು ವಂದಿಸಿ ಪ್ರೇಮಲತಾ ಹಡಿಲು,ಪ್ರೇಮಲತಾ ಗಡದಕೋಡಿ, ಪ್ರಮೀಳಾ ಕಾಣಿಚಾರ್ ಪ್ರಾರ್ಥನೆ, ವಿಶ್ವನಾಥ ಕುಳಾಲ್, ತನುಷ ಗಿರಿನಿವಾಸ ನಿರೂಪಣೆಗಳಲ್ಲಿ ಸಹಕರಿಸಿದರು.








