ಮಂಡೆಕೋಲು:ಕೂಚಿಪುಡಿ ನೃತ್ಯದಲ್ಲಿ ನಿರಂತರ 24 ಗಂಟೆಗಳ ಕಾಲ ನೃತ್ಯ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ತನ್ನ ಹೆಸರನ್ನು ದಾಖಲಿಸಿ ವಿಶ್ವದಾಖಲೆ ನಿರ್ಮಿಸಿರುವ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ, ಮಂಡೆಕೋಲಿನ ಎಂ.ಅಭಿಷೇಕ್ ಕಣೆಮರಡ್ಕ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮವು ಏ.20ರಂದು
ಮಂಡೆಕೋಲಿನಲ್ಲಿ ನಡೆಯಲಿದೆ. 20ರಂದು ಅಪರಾಹ್ನ 3ಕ್ಕೆ ಮೆರವಣಿಗೆ ನಡೆಯಲಿದೆ.ಸಂಜೆ 4ರಿಂದ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಸಹಕಾರ ಸದನ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ
ಸದಾನಂದ ಮಾವಜಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ನೆಹರೂ ಮೆಮೋರಿಯಲ್ ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕಿ ಡಾ. ಮಮತಾ ಕೆ ಭಾಗವಹಿಸಲಿದ್ದಾರೆ ಎಂದ ಕಾರ್ಯಕ್ರಮದ ಸಂಘಟಕರು ಹಾಗೂ ಮಂಡೆಕೋಲು ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ತಿಳಿಸಿದ್ದಾರೆ.
















