ಬೆಂಗಳೂರು: ಎಂಟು ಉಪ ವಿಭಾಗಗಳಿಗೆ ನೂತನ ಸಹಾಯಕ ಆಯಕ್ತರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ದ.ಕ. ಜಿಲ್ಲೆಯ ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಪಾತ್ರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ಅಪರ್ಣಾ ರಮೇಶ್, ಕಾರವಾರ ಉಪ ವಿಭಾಗದ ಸಹಾಯಕ ಆಯಕ್ತರಾಗಿ ಶ್ರೀಕೃಷ್ಣ, ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ನಾರ್ವಡೆ ವಿನಾಯಕ ಕರ್ಭರಿ, ಚಿಕ್ಕಮಗಳೂರು ಜಿಲ್ಲೆಯ
ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ದಲ್ಜೀತ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಸಾಗರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಯತೀಶ್ ಆರ್., ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಮುಹಮ್ಮದ್ ಹಾರಿಸ್ ಸುಮೈರ್ ಹಾಗೂ ಕಲಬುರಗಿ ಜಿಲ್ಲೆಯ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರೂಪಿಂದರ್ ಕೌರ್ ಅವರನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಉಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಹೊಸದಾಗಿ ನೇಮಕಗೊಂಡ ಎಲ್ಲ ಎಂಟು ಸಹಾಯಕ ಆಯುಕ್ತರು 2021ನೇ ಬ್ಯಾಚ್ ನ ಐಎಎಸ್ ಅಧಿಕಾರಿಗಳಾಗಿದ್ದಾರೆ.
ಪುತ್ತೂರು ಉಪವಿಭಾಗದ ಆಯುಕ್ತ ಎಂ ಗಿರೀಶ್ ನಂದನ್ ಅವರನ್ನು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತರಾಗಿ(ಕಂದಾಯ) ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪುತ್ತೂರಿಗೆ 2021ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಜುಬಿನ್ ಮಹಾಪಾತ್ರ ಅವರನ್ನು ಪುತ್ತೂರು ಉಪ ವಿಭಾಗದ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಪುತ್ತೂರು ಉಪವಿಭಾಗದ ಆಯುಕ್ತರಾಗಿದ್ದು, ಬಳಿಕ ಮಡಿಕೇರಿ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.










