ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜ್ಯದ ವಿವಿಧ ಪ್ರಾಧಿಕಾರಗಳು ಮತ್ತು
ಅಕಾಡೆಮಿಗಳ ಅಧ್ಯಕ್ಷರ ಸಮನ್ವಯ ಸಭೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಸಭೆಯಲ್ಲಿ ಭಾಗವಹಿಸಿದ್ದರು. ವಿವಿಧ ಪ್ರಾಧಿಕಾರಗಳ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಭಾಗವಹಿಸಿ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.